ಅಪಘಾತ: ಶಾಸಕಿ ಅಂಜಲಿ ನಿಂಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಅಪಘಾತ: ಶಾಸಕಿ ಅಂಜಲಿ ನಿಂಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

YK   ¦    Apr 14, 2019 10:59:12 AM (IST)
ಅಪಘಾತ: ಶಾಸಕಿ ಅಂಜಲಿ ನಿಂಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೆ ಒಳಗಾಗಿ ಅವರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಯಿತು.

ಶನಿವಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು ಇನ್ನೂ 3 ವಾರ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.

ಶುಕ್ರವಾರ ಚುನಾವಣಾ ಪ್ರಚಾರ ಕೈಗೊಳ್ಳಲು ಮಹಾರಾಷ್ಟ್ರದ ನಾಂದೇಡಕ್ಕೆ ಅವರು ಕಾರಿನಲ್ಲಿ ತೆರಳುತ್ತಿದ್ದರು. ಸೋಲ್ಲಾಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.