ಬೆಂಗಳೂರು ಸೇರಿದಂತೆ ೯ ಜಿಲ್ಲೆಗಳು ನಾಳೆಯಿಂದ ಬಂದ್

ಬೆಂಗಳೂರು ಸೇರಿದಂತೆ ೯ ಜಿಲ್ಲೆಗಳು ನಾಳೆಯಿಂದ ಬಂದ್

YK   ¦    Mar 22, 2020 02:50:14 PM (IST)
ಬೆಂಗಳೂರು ಸೇರಿದಂತೆ ೯ ಜಿಲ್ಲೆಗಳು ನಾಳೆಯಿಂದ ಬಂದ್

ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ೯ ಜಿಲ್ಲೆಗಳು ನಾಳೆಯಿಂದ ಮಾರ್ಚ್ ೩೧ರವರೆಗೆ ಸಂಚಾರ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆದಿಡುವುದಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಅಗತ್ಯ ಸೇವೆ ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ಈ ೯ ಜಿಲ್ಲೆಗಳಲ್ಲಿ ನಿರ್ಬಂಧ ಹೇರಲಾಗಿದೆ.ಸಾರ್ವಜನಿಕ ರಸ್ತೆ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಾಬಳ್ಳಾಪುರ, ಮೈಸೂರು, ಧಾರವಾಡ, ಕಲಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾಗಿದೆ.