೧೬ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಬಿಎಸ್ ಯಡಿಯೂರಪ್ಪ

೧೬ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಬಿಎಸ್ ಯಡಿಯೂರಪ್ಪ

YK   ¦    Mar 14, 2019 10:00:14 AM (IST)
೧೬ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಇದೇ ೧೬ರಂದು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ೨೦ರಿಂದ ೨೨ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇದೇ ೧೫ರಂದು ಬಿಜೆಪಿಯ ಪ್ರಮುಖರ ಸಭೆ ನಡೆಯಲಿದೆ. ೧೬ರಂದು ದೆಹಲಿಯಲ್ಲಿ ವರಿಷ್ಠರ ಜತೆ ಸಭೆ ನಡೆದು ಆದಾದ ಬಳಿಕ ೧೬ರಂದು ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

೧೬ಹಾಳಿ ಸಂಸದರಿಗೆ ಟಿಕೆಟ್ ನೀಡಲಾಗುತ್ತದೆ. ಅದಲ್ಲದೆ ಇನ್ನೆರಡು ದಿನದಲ್ಲಿ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದರು.