ಕಾವೇರಿ ನಿರ್ವಹಣಾ ಮಂಡಳಿ ರಚನೆ: ರಾಜ್ಯದ ಪರ ನಿಂತ ಕೇಂದ್ರ ಸರ್ಕಾರ

ಕಾವೇರಿ ನಿರ್ವಹಣಾ ಮಂಡಳಿ ರಚನೆ: ರಾಜ್ಯದ ಪರ ನಿಂತ ಕೇಂದ್ರ ಸರ್ಕಾರ

Oct 04, 2016 01:40:32 PM (IST)

ಬೆಂಗಳೂರು: ಸುಪ್ರೀಂ ಕೋರ್ಟ್ ಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ನಿರ್ದೇಶನ ನೀಡುವ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯದ ಪರ ಸೋಮವಾರ ಅರ್ಜಿ ಸಲ್ಲಿಸಿದೆ.

ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ನಿರ್ದೇಶನ ನೀಡುವ ಅಧಿಕಾರ ಸುಪ್ರೀಂ ಕೋರ್ಟ್‌ ವ್ಯಾಪ್ತಿಗೆ ಬರುವುದಿಲ್ಲ ಹಾಗೂ ಮಂಡಳಿ ರಚನೆ ಮಾಡುವ ಅಧಿಕಾರ ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್‌ ಮುಕುಲ್‌ ರೋಹ್ಟಗಿ ಈ ಆದೇಶವನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೆ. 30ರಂದುನಿರ್ದೇಶನ ನೀಡಿತ್ತು. ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಉದಯ್‌ ಲಲಿತ್ ಮತ್ತು ದೀಪಕ್ ಮಿಶ್ರಾ ಅವರ ವಿಭಾಗೀಯ ಪೀಠ ನಿರ್ದೇಶನ ನೀಡಿದ್ದು, ಸದ್ಯ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಪರ ಇರುವುದರಿಂದ ರಾಜ್ಯಕ್ಕೆ ಬಲ ಬಂದಂತಾಗಿದ್ದು, ರಾಜ್ಯ ಸರ್ಕಾರದ ಪರ ವಕೀಲರು ಕೂಡ ಇದೇ ರೀತಿಯಲ್ಲಿ ಅರ್ಜಿ ಸಲ್ಲಿಸಲಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತ ಆದೇಶವನ್ನು ಹಿಂತೆಗೆಯುವ  ಸಾಧ್ಯತೆ ಇದೆ.