ನಾಳೆಯಿಂದ ಮತ್ತೆ 36 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ

ನಾಳೆಯಿಂದ ಮತ್ತೆ 36 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ

Sep 30, 2016 03:52:01 PM (IST)

ಬೆಂಗಳೂರು: ಕಾವೇರಿ ವಿವಾದ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ಆದೇಶದಿಂದ ರಾಜ್ಯಕ್ಕೆ ಮತ್ತೆ ಆಘಾತ ಉಂಟಾಗಿದ್ದು, ನಾಳೆಯಿಂದ ಮತ್ತೆ 36 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕರ್ನಾಟಕ ರಾಜ್ಯಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲಾ ರಾಜ್ಯಗಳು ಪಾಲಿಸಬೇಕು.ಎಲ್ಲಾ ರಾಜ್ಯಗಳಂತೆ ಕರ್ನಾಟಕವೂ ಒಂದು ಹೇಳಿದೆ. ಅಲ್ಲದೆ ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು 36 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಮತ್ತೊಂದೆಡೆ ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ನಾಳೆ ಸಂಜೆ 4ಗಂಟೆಯೊಳಗೆ ಮಂಡಳಿಯ ಪ್ರತಿನಿಧಿಗಳ ಮಾಹಿತಿ ನಮಗೆ ಕೊಡಿ ಎಂದು ಕೋರ್ಟ್ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಮುಂದೂಡಿದೆ.