ಉಪನ್ಯಾಸಕರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

ಉಪನ್ಯಾಸಕರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

HSA   ¦    Mar 13, 2019 09:46:07 AM (IST)
ಉಪನ್ಯಾಸಕರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

ಬೆಂಗಳೂರು: ವಿವಿಧ ಬೇಡಿಕೆಗಳು ಈಡೇರದೆ ಇದ್ದರೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಬಹಿಷ್ಕಾರ ಮಾಡುವುದಾಗಿ ಉಪನ್ಯಾಸಕರ ಸಂಘವು ಎಚ್ಚರಿಕೆ ನೀಡಿದೆ.

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಮಾ.18ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಅಂತ್ಯಗೊಳ್ಳಲಿದೆ. ಸುಮಾರು 6.73 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದಾರೆ. ಮಾ.21ರಿಂದ ಮೌಲ್ಯಮಾಪನ ಆರಂಭವಾಗಬೇಕಾಗಿದೆ.

ಉಪನ್ಯಾಸಕರು ಇಟ್ಟಿರುವ ವಿವಿಧ ಬೇಡಿಕೆಗಳಿಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೆ ಇದ್ದರೆ ಮೌಲ್ಯಮಾಪನ ಬಹಿಷ್ಕಾರ ಮಾಡುವುದಾಗಿ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.