ರೈತರ ಬೆಳೆಗಳಿಗೆ ನೀರು ಹರಿಸಲು ಸರ್ಕಾರ ತಿರ್ಮಾನ

ರೈತರ ಬೆಳೆಗಳಿಗೆ ನೀರು ಹರಿಸಲು ಸರ್ಕಾರ ತಿರ್ಮಾನ

Oct 03, 2016 07:15:38 PM (IST)

ಬೆಂಗಳೂರು: ರಾಜ್ಯದ ರೈತರ ಬೆಳೆಗಳಿಗೆ ನೀರು ಹರಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಸಂಬಂಧ ಇಂದು ವಿಧಾನಸಭೆಯಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ನಿರ್ಣಯ ಮಂಡಿಸಿದ್ದಾರೆ.

ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನ್ಯಾಯಾಲಯದ ಮೇಲೆ ನಮಗೆ ಅಪಾರವಾದ ಗೌರವವಿದೆ. ಆದರೆ ಕುಡಿಯುವ ನೀರಿನ ಹಕ್ಕು ಮೂಲಭೂತ ಹಕ್ಕಾಗಿದೆ. ಹೀಗಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ  ಎಂದರು.

ಕಳೆದ ಸೆ.30ರಂದು ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕಲ್ ರೋಹ್ಟಗಿ ಅವರು ಇಂದು ಕೇಂದ್ರ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಆದೇಶದಂತೆ ನಿರ್ವಹಣಾ  ಮಂಡಳಿ ರಚನೆ ಸಾಧ್ಯವಿಲ್ಲ. ನಿರ್ವಹಣಾ ಮಂಡಳಿ ರಚನೆ ಜವಾಬ್ದಾರಿ ಸಂಸತ್ತಿನ ಕರ್ತವ್ಯವಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ನಿರ್ವಹಣಾ ಮಂಡಳಿ ರಚಿಸಬೇಕಿದೆ ಎಂದು ತಿಳಿಸಿದರು.