ಇಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ

ಇಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ

SRJ   ¦    Apr 16, 2018 01:08:49 PM (IST)
ಇಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಪಕ್ಷವೂ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ, ಇದೀಗ ಬಿಜೆಪಿ ತಮ್ಮ ಪ್ಲ್ಯಾನ್ ಬದಲಿಸಿಕೊಂಡಿದೆ. ಭಾನುವಾರ ರಾತ್ರಿ ಬಿಡುಗಡೆಯಾಗಬೇಕಿದ್ದ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ತಡೆ ಹಿಡಿದಿದೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ.
ಬಿಜೆಪಿ ತನ್ನ ಎರಡನೇ ಹಂತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಭೆ ನಡೆಸಿ ರಾತ್ರಿ 80 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಎಲ್ಲಾ ಯೋಜನೆ ಹಾಕಿಕೊಂಡಿತ್ತು. ಆದರೆ ಕಾಂಗ್ರೆಸ್ ಒಂದೇ ಹಂತದಲ್ಲಿ ಸುಮಾರು 218 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪಟ್ಟಿ ತಡೆ ಹಿಡಿದಿದೆ.

ಕಾಂಗ್ರೆಸ್ ಪಕ್ಷದ ಇಂದಿನ ಬೆಳವಣಿಗೆ ಆಧರಿಸಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.