ಸಂಚಾರಿ ನಿಯಮ ಉಲ್ಲಂಘನೆ: ಬೆಂಗ್ಳೂರಲ್ಲಿ ವಾರದಲ್ಲಿ 1 ಕೋಟಿ ಹಣ ಸಂಗ್ರಹ

ಸಂಚಾರಿ ನಿಯಮ ಉಲ್ಲಂಘನೆ: ಬೆಂಗ್ಳೂರಲ್ಲಿ ವಾರದಲ್ಲಿ 1 ಕೋಟಿ ಹಣ ಸಂಗ್ರಹ

YK   ¦    Sep 12, 2019 12:03:49 PM (IST)
 ಸಂಚಾರಿ ನಿಯಮ ಉಲ್ಲಂಘನೆ: ಬೆಂಗ್ಳೂರಲ್ಲಿ ವಾರದಲ್ಲಿ 1 ಕೋಟಿ ಹಣ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಬೆಂಗಳೂರಿನಲ್ಲಿ ನಗರ ಸಂಚಾರಿ ಪೊಲೀಸರು ಇಂದು ವಾರದಲ್ಲಿ 1.10 ಕೋಟಿ ಹಣವನ್ನು ಸಂಗ್ರಹಿಸಿದ್ದಾರೆ. ಮಂಗಳವಾರ ಹಾಗೂ ಬುಧವಾರ 42 ಲಕ್ಷ ರೂಪಾಯಿ ಹಣವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರಿ ಪೊಲೀಸರ ಪ್ರಕಾರ, ಸೀಟ್ ಬೆಲ್ಟ್ ಹಾಕದಿರುವುದು, ಸಿಗ್ನಲ್ ಜಂಪ್, ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ, ಒಂದೇ ಬೈಕ್ ನಲ್ಲಿ ಮೂವರು ಸಂಚಾರ ಹಾಗೂ ಹೆಲ್ಮೆಟ್ ಧರಿಸದೇ ಇರುವುದಕ್ಕೆ ಹೆಚ್ಚು ದಂಡ ಸಂಗ್ರಹಿಸಲಾಗಿದೆ.

ಮಂಗಳವಾರ ರಾತ್ರಿ ಮದ್ಯ ಸೇವಿಸಿ ಡಿಎಲ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕೆ ವ್ಯಕ್ತಿಯೊಬ್ಬನಿಗೆ 15ಸಾವಿರ ದಂಡವನ್ನು ಹಾಕಲಾಯಿತು. ಈ ವೇಳೆ ಆತ ಪೊಲೀಸರ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ವಿವರಿಸಿದರು.