ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

Oct 01, 2016 03:13:16 PM (IST)

ಬೆಂಗಳೂರು: ಕಾವೇರಿ ನೀಇರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಮಾಜಿ ಪ್ರಧಾನಿ ದೇವೇಗೌಡ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ಕಾವೇರಿ ವಿಚಾರವಾಗಿ ಈ ಹಿಂದೆ ಘೋಷಣೆಯಾದ ಐ ತೀರ್ಪನ್ನು  ವಿರೋಧಿಸಿ ಈಗಾಗಲೇ ಕರ್ನಾಟಕ ಸರ್ಕಾರ ಸಿಎಲ್ ಪಿ ಸಲ್ಲಿಸಿದೆ. ಐ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ತೀರ್ಪು ಮರುಪರಿಶೀಲಿಸುವಂತೆ ಕೋರಿಕೆ ಸಲ್ಲಿಸಲಾಗಿದೆ. ಸುಪ್ರೀಂ  ಕೋರ್ಟ್ ಕೂಡ ರಾಜ್ಯ ಸರ್ಕಾರದ ಮನವಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಈ ಹಿಂದೆ ಹೇಳಿತ್ತು. ಇದೇ ಅಕ್ಟೋಬರ್ 18ಕ್ಕೆ ಸಿಎಲ್ ಪಿ ವಿಚಾರಣೆಗೆ ಬರಲಿದೆ. ಇನ್ನು 2013ರಲ್ಲಿ ಕಾವೇರಿ  ನಿರ್ವಹಣಾ ಮಂಡಳಿ ರಚನೆಗೆ ನಿರ್ಧರಿಸಲಾಗಿತ್ತು. ಹೀಗಿದ್ದೂ ತಮಿಳುನಾಡು ಸಿಎಂ ಜಯಲಲಿತಾ ಅವರು ಪದೇ ಪದೇ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಅವರ ಈ ನಡೆಯ ಹಿಂದಿನ ಉದ್ದೇಶವೇನೋ ತಿಳಿಯುತ್ತಿಲ್ಲ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

 ಇಂದು  ಬೆಳಗ್ಗೆ 6.30ಕ್ಕೆ ಗಾಂಧಿ ಬಜಾರ್ ಬಳಿಯಿರುವ ಕಾರಂಜಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡ ಅವರು, ನಂತರ ಕೋಟೆ ವೆಂಕಟರಮಣ ದೇವಾಲಯಕ್ಕೆ ಪೂಜೆ ಸಲ್ಲಿಸಿದರು. ಅವರು ಗಾಂಧಿ ಪ್ರತಿಮೆ ಬಳಿ ಕುಳಿತು  ಧರಣಿ ನಡೆಸುತ್ತಿದ್ದು, ಅವರಿಗೆ ಪರಿಷತ್ ಸದಸ್ಯ ಟಿಎ ಷರವಣ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಸಾಥ್  ನೀಡಿದ್ದಾರೆ.