ಸಭಾಧ್ಯಕ್ಷರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿ: ಸುಪ್ರೀಂ ಕೋರ್ಟ್ ಅತೃಪ್ತರಿಗೆ ಸೂಚನೆ

ಸಭಾಧ್ಯಕ್ಷರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿ: ಸುಪ್ರೀಂ ಕೋರ್ಟ್ ಅತೃಪ್ತರಿಗೆ ಸೂಚನೆ

YK   ¦    Jul 11, 2019 12:15:56 PM (IST)
ಸಭಾಧ್ಯಕ್ಷರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿ: ಸುಪ್ರೀಂ ಕೋರ್ಟ್ ಅತೃಪ್ತರಿಗೆ ಸೂಚನೆ

ಬೆಂಗಳೂರು: ಸಂಜೆಯೊಳಗೆ ಖುದ್ದಾಗಿ ಸಭಾಧ್ಯಕ್ಷರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವಂತೆ ಮುಂಬೈನಲ್ಲಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ.

10 ಅತೃಪ್ತ ಶಾಸಕರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಸ್ಪೀಕರ್ ಭೇಟಿ ವೇಳೆ ಸೂಕ್ತ ಭದ್ರತೆ ಒದಗಿಸಲು ತಿಳಿಸಿದೆ.

ಮುಂಬೈನಿಂದ ಬೆಂಗಳೂರಿಗೆ ತೆರಳಿ ಖುದ್ದಾಗಿ ಭೇಟಿ ಮಾಡಿದ ನಂತರ, ಸ್ಪೀಕರ್ ಎಲ್ಲ ಶಾಸಕರ ವಿಚಾರಣೆ ನಡೆಸಲಿ ಎಂದು ಪೀಠ ತಿಳಿಸಿದೆ.