ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ

ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ

HSA   ¦    Jan 09, 2019 11:05:39 AM (IST)
ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ನ ಎರಡನೇ ದಿನ ಬೆಂಗಳೂರಿನಲ್ಲಿ ಹಲವಾರು ಕಡೆ ಬಿಎಂಟಿಸಿ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಬುಧವಾರ ಬೆಳಗ್ಗೆ ಸುಮಾರು 30 ಬಸ್ ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮಂಗಳವಾರ ರಾತ್ರಿ ವೇಳೆ 12 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

ಮಂಗಳವಾರ ಬೆಂಗಳೂರಿನಲ್ಲಿ ಭಾರತ್ ಬಂದ್ ಗೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬಸ್ ಗಳ ಮೇಲೆ ಕಲ್ಲು ತೂರಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಕೆಲವೊಂದು ಕಡೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕೆಲವೊಂದು ಕಡೆಗಳಲ್ಲಿ ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ.