ಕಾಮಿಡಿ ಪಾತ್ರದಲ್ಲಿ ನಳಿನ್ ಕುಮಾರ್ ಕಟೀಲ್: ಸಿದ್ದರಾಮಯ್ಯ ಲೇವಡಿ

ಕಾಮಿಡಿ ಪಾತ್ರದಲ್ಲಿ ನಳಿನ್ ಕುಮಾರ್ ಕಟೀಲ್: ಸಿದ್ದರಾಮಯ್ಯ ಲೇವಡಿ

YK   ¦    Sep 09, 2019 06:19:24 PM (IST)
ಕಾಮಿಡಿ ಪಾತ್ರದಲ್ಲಿ ನಳಿನ್ ಕುಮಾರ್ ಕಟೀಲ್: ಸಿದ್ದರಾಮಯ್ಯ ಲೇವಡಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಡಿಕೆಶಿ ಬಂಧನನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ ಸಂಬಂಧ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

‘ರಾಜ್ಯದ ಬಿಜೆಪಿ ನಾಟಕ ಮಂಡಳಿಗೆ ಕಾಮಿಡಿ ಪಾತ್ರದ ಅಗತ್ಯವಿತ್ತು. ಅದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಪಕ್ಷಕ್ಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರನ್ನು ಅವರ ಪಕ್ಷದವರೂ ಸೇರಿದಂತೆ ಯಾರೂ ಸೀರಿಯಸ್ಸಾಗಿ ತಗೊಳ್ತಿಲ್ಲ, ಅದಕ್ಕಾಗಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ’.

‘ಒಬ್ಬ ಸಂಸದರಿಗೆ, ಅದರಲ್ಲೂ ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಇ,ಡಿ, ಐ.ಡಿ. ಇಲಾಖೆ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?ಇದುವರೆಗೂ ಬಿಜೆಪಿ ಬೇರೆ ಬೇರೆ ಕೋಮುಗಳ ನಡುವೆ ಬೆಂಕಿ ಹಚ್ಚಿ ತನ್ನ ಸ್ವಾರ್ಥ ಸಾಧಿಸಿಕೊಳ್ಳುತ್ತಿತ್ತು, ಈಗ ತನ್ನ ಎದುರಾಳಿ ನಾಯಕರ ನಡುವೆ ಹುಳಿ ಹಿಂಡುವ ಹೀನ ಕಾರ್ಯಕ್ಕೆ ಇಳಿದಿದೆ’.