ಬಿಜೆಪಿ ಸೇನೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್

ಬಿಜೆಪಿ ಸೇನೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್

YK   ¦    Apr 15, 2019 03:13:25 PM (IST)
ಬಿಜೆಪಿ ಸೇನೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರುಗಳು ಸೇನೆಗೆ ಬಲ ತುಂಬುತ್ತೇವೆ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ಭಾನುವಾರ ಚಿಂತಕರ ಚಾವಡಿಯ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿ, ಭಾರತೀಯ ಸೇನೆಯನ್ನು ಪ್ರಧಾನಿ ಮೋದಿಯಾಗಲಿ ಅಥವಾ ಬಿಜೆಪಿ ನಾಯಕರಾಗಲಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿಲ್ಲ.

2019ರಲ್ಲಿ ಪುಲ್ವಾಮಾ ಘಟನೆಯ ಬಳಿಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿತು. ಈ ಮೂಲಕ ಎನ್ ಡಿಎ ಪ್ರಬಲ ಸರ್ಕಾರವಾಗಿ ಹೊರಹೊಮ್ಮಿದೆ. 2008ರಲ್ಲಿ ಮುಂಬೈ ದಾಳಿ ನಡೆದಾಗ ಮನಮೋಹನ್ ಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆದಿತ್ತು ಎಂಬುದಕ್ಕೆ ನಮ್ಮ ದೇಶವೇ ಸಾಕ್ಷಿ ಎಂದರು.