ಗಮನಿಸಿ...ಬಂದ್ ದಿನಾಂಕ ಬದಲಾಗಿದೆ...!

ಗಮನಿಸಿ...ಬಂದ್ ದಿನಾಂಕ ಬದಲಾಗಿದೆ...!

HSA   ¦    Jan 11, 2018 07:12:42 PM (IST)
ಗಮನಿಸಿ...ಬಂದ್ ದಿನಾಂಕ ಬದಲಾಗಿದೆ...!

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಜ.27ರಂದು ನಡೆಯಬೇಕಾಗಿದ್ದ ಕರ್ನಾಟಕ ಬಂದ್ ನ್ನು ಜ.25ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಜ.27ರಂದು ಕರ್ನಾಟಕ ಬಂದ್ ಆಚರಿಸಿ ಜ.28ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲು ನಿರ್ಧರಿಸಲಾಗಿತ್ತು. ಆದರೆ ಈಗ ಜ.25ರಂದು ಬಂದ್ ನಡೆಸಲು ತೀರ್ಮಾನಿಸಲಾಗಿದೆ ಎಂದು ವಾಟಾಳ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮಹದಾಯಿ ವಿಚಾರದಲ್ಲಿ ಮಧ್ಯಪ್ರದೇಶ ಮಾಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ವಾಟಾಳ್ ತಿಳಿಸಿದರು.