ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಆಯ್ಕೆ

ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಆಯ್ಕೆ

HSA   ¦    Mar 24, 2020 05:17:59 PM (IST)
ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಆಯ್ಕೆ

ಬೆಂಗಳೂರು: ಬಿಜೆಪಿ ಶಾಸಕ ಆನಂದ ಮಾಮನಿ ಅವರು ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಬೆಳಗಾವಿ ಸವದತ್ತಿಯಿಂದ ಸತತ ಮೂರನೇ ಬಾರಿಗೆ ಬಿಜೆಪಿಯ ಶಾಸಕರಾಗಿ ಆಯ್ಕೆಯಾಗಿದ್ದರು.

ಜೆಡಿಎಸ್ ನ ಕೃಷ್ಣಾ ರೆಡ್ಡಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಾಮನಿ ಅವರು ಉಪ ಸಭಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.