ಗಿರೀಶ್ ಕಾರ್ನಾಡ್ ವಿಧಿವಶ: ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ

ಗಿರೀಶ್ ಕಾರ್ನಾಡ್ ವಿಧಿವಶ: ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ

YK   ¦    Jun 10, 2019 12:23:48 PM (IST)
ಗಿರೀಶ್ ಕಾರ್ನಾಡ್ ವಿಧಿವಶ: ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾದ ಹಿನ್ನೆಲೆ ಇಂದು ಸರ್ಕಾರಿ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಸರ್ಕಾರ ರಜೆಯನ್ನು ಘೋಷಿಸಿದೆ.

ಈ ಸಂಬಂಧ ಟ್ವೀಟ್ ಮಾಡಿದ ಸಿಎಂ ಕುಮಾರಸ್ವಾಮಿ ಅವರು, ಮೂರು ದಿನ ಶೋಕಾಚರಣೆ ನಡೆಸಲಾಗುವುದು. ಕರ್ನಾಟಕ ಸಂಸ್ಕೃತಿ ಹಾಗೂ ಸಾಹಿತ್ಯ ಲೋಕಕ್ಕೆ ಕಾರ್ನಾಡ್ ನೀಡಿದ ಕೊಡುಗೆಯನ್ನು ಗುರುತಿಸಿ ರಜೆ ಹಾಗೂ ಶೋಕಾಚರಣೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಆದರೆ ಸರ್ಕಾರಿ ಶಾಲೆಗಳಿಗೆ ಅಧಿಕೃತ ಮಾಹಿತಿ ಬಾರದೆ ಇರುವ ಹಿನ್ನೆಲೆ ಸರ್ಕಾರಿ ಶಾಲೆಗಳು ಎಂದಿನಂತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.