ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ಆರೋಪಿಗಳ ರಿಟ್ ಅರ್ಜಿ ವಜಾ

ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ಆರೋಪಿಗಳ ರಿಟ್ ಅರ್ಜಿ ವಜಾ

HSA   ¦    Jan 08, 2019 03:01:14 PM (IST)
ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ಆರೋಪಿಗಳ ರಿಟ್ ಅರ್ಜಿ ವಜಾ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಸಾಕ್ಷಿಗಳ ಮರುವಿಚಾರಣೆ ನಡೆಸಬಾರದು ಎಂದು ಆರೋಪಿಗಳು ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ತೀರ್ಪು ನೀಡಿದೆ.

2016ರ ಅಕ್ಟೋಬರ್ 16ರಂದು ಶಿವಾಜಿನಗರದಲ್ಲಿ ತನ್ನ ಸ್ನೇಹಿತರ ಜತೆಗಿದ್ದ ರುದ್ರೇಶ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಹತ್ಯೆ ಮಾಡಿದ್ದರು.

ಈ ಪ್ರಕರಣದಲ್ಲಿ ಆಸೀಮ್ ಷರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದರು.

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಪ್ರಕರಣದ ತನಿಖೆ ನಡೆಸುತ್ತಿದ್ದು, ಎನ್ ಐಎ ವಿಶೇಷ ನ್ಯಾಯಾಲಯದಲ್ಲಿ ಇದರ ವಿಚಾರಣೆ ನಡೆಯುತ್ತಿದೆ.

ರುದ್ರೇಶ್ ಸ್ನೇಹಿತರಾದ ಬಿ.ಜಯರಾಂ, ಡಿ. ಕುಮಾರೇಶನ್ ಮತ್ತು ಹರಿಕೃಷ್ಣ ಅವರು ಪ್ರಮುಖ ಸಾಕ್ಷಿಗಳಾಗಿದ್ದಾರೆ.