ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ: ಯಡಿಯೂರಪ್ಪ ಟೀಕೆ

ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ: ಯಡಿಯೂರಪ್ಪ ಟೀಕೆ

HSA   ¦    Feb 13, 2018 10:15:14 AM (IST)
ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ: ಯಡಿಯೂರಪ್ಪ ಟೀಕೆ

ಬೆಂಗಳೂರು: ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆದಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟ್ಟರ್ ನಲ್ಲಿ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಸೋಮವಾರ ನರಸಿಂಹ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡುವ ಮೊದಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಂಸಹಾರಿ ಊಟ ಮಾಡಿದ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರತೀ ಬಾರಿ ಯಾಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನು ಸಮಾನವಾಗಿ ಕಾಣುವುದು ಸಮಾಜವಾದ. ನಿಮ್ಮದು ಮಜಾವಾದ ಎಂದು ಯಡಿಯೂರಪ್ಪ ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ.