ವಿಧಾನಸೌಧದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ವಿಧಾನಸೌಧದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

HSA   ¦    Jun 24, 2019 02:14:44 PM (IST)
ವಿಧಾನಸೌಧದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವ್ಯಕ್ತಿಯೊಬ್ಬ ವಿಧಾನಸೌಧದ 3ನೇ ಮಹಡಿಯಲ್ಲಿರುವ ಶೌಚಾಲಯದಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯು ಸೋಮವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯನ್ನು ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದೆ. ಆತ ಆತ್ಮಹತ್ಯೆಗೆ ಯತ್ನಿಸಿರುವುದು ಯಾಕೆಂದು ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ರೇವಣ್ಣ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.