ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಅದರೊಳಗಿದ್ದ ಬಾಲಕಿಯ ಕೈ ತುಂಡಾದ ಘಟನೆಯು ನಗರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಮೈಸೂರು ರಸ್ತೆಯ ನೆಕ್ಸಾ ಶೋರೂಂ ಸಮೀಪದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ ಮೂರುವರೆ ವರ್ಷದ ಬಾಲಕಿ ದಿಯಾಪ್ರಸಾದ್ ಕೈ ತುಂಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಬಾಲಕಿ ಸಹಿತ 9 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.