ಕೂಡಲಸಂಗಮ ಬಸವಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

ಕೂಡಲಸಂಗಮ ಬಸವಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

HSA   ¦    Mar 14, 2019 05:38:07 PM (IST)
ಕೂಡಲಸಂಗಮ ಬಸವಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

ಬೆಂಗಳೂರು: ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರು ಗುರುವಾರ ಮಧ್ಯಾಹ್ನ ವೇಳೆ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಮಾ.9ರಂದು ಬೆಂಗಳೂರಿಗೆ ಕರೆತಂದು ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಇಂದು ಮಧ್ಯಾಹ್ನ ವೇಳೆಗೆ ಅವರು ಚಿಕಿತ್ಸೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ವರ್ಷ ನಡೆದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದರು. ಅಲ್ಲಿನ ಹವಾಮಾನಕ್ಕೆ ಒಗ್ಗಿಕೊಳ್ಳಲು ಸಾಧ್ಯವಾಗದೆ ಅನಾರೋಗ್ಯಕ್ಕೆ ಒಳಗಾಗಿದ್ದರು.