ಲೋಕಸಭೆಯಲ್ಲಿ 22 ಸೀಟು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ಯಡಿಯೂರಪ್ಪ

ಲೋಕಸಭೆಯಲ್ಲಿ 22 ಸೀಟು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ಯಡಿಯೂರಪ್ಪ

HSA   ¦    Mar 13, 2019 10:36:44 AM (IST)
ಲೋಕಸಭೆಯಲ್ಲಿ 22 ಸೀಟು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ಯಡಿಯೂರಪ್ಪ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) 22 ಸೀಟು ಗೆದ್ದರೆ ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಯರಗಟ್ಟಿ ಗ್ರಾಮದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಬೇಕಿದ್ದರೆ ಮತದಾರರು ಬಿಜೆಪಿಗೆ ಮತ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಸೀಟುಗಳನ್ನು ಗೆದ್ದುಕೊಂಡರೆ, ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.