ಜೂನ್ ನಿಂದ KSRTC, BMTC ಬಸ್ ಪ್ರಯಾಣ ದರ ಹೆಚ್ಚಳ

ಜೂನ್ ನಿಂದ KSRTC, BMTC ಬಸ್ ಪ್ರಯಾಣ ದರ ಹೆಚ್ಚಳ

HSA   ¦    May 25, 2019 03:17:25 PM (IST)
ಜೂನ್ ನಿಂದ KSRTC, BMTC ಬಸ್ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವು ಮುಂದಿನ ತಿಂಗಳಿನಿಂದ ಏರಿಕೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವು ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ದರದಲ್ಲಿ ಶೇ.20ರಷ್ಟು ಹೆಚ್ಚಿಸಲು ನಿರ್ಧಾರಿಸಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಅವರು ತಿಳಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಏರಿಕೆ, ಬಿಡಿಭಾಗಗಳ ಬೆಲೆ ಹಾಗೂ ಕಾರ್ಮಿಕರ ಸಂಬಳ ಹಾಗೂ ಇನ್ನಿತರ ನಿರ್ವಹಣಾ ವೆಚ್ಚವು ಹೆಚ್ಚುತ್ತಿದೆ. ಕಳೆದ ಏಳು ವರ್ಷಗಳಿಂದ ಬಸ್ ದರ ಏರಿಕೆ ಮಾಡಿಲ್ಲ. ಈಗ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.