ನಾಳೆ ದಕ್ಷಿಣ ಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

ನಾಳೆ ದಕ್ಷಿಣ ಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

HSA   ¦    Aug 10, 2019 04:57:30 PM (IST)
ನಾಳೆ ದಕ್ಷಿಣ ಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

ಬೆಂಗಳೂರು: ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವಂತಹ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ(ಆ.11) ಮತ್ತು ಸೋಮವಾರ(ಆ.12)ದಂದು ಭೇಟಿ ನೀಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ಶನಿವಾರವೇ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಬೇಕಿತ್ತು. ಆದರೆ ಈಗಿರುವಂತಹ ಹವಾಮಾನದಲ್ಲಿ ವೈಮಾನಿಕ ಸಮೀಕ್ಷೆ ಅಸಾಧ್ಯವಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಭೇಟಿ ಮುಂದೂಡಿದ್ದಾರೆ.

ಯಡಿಯೂರಪ್ಪ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕವೇ ಭೇಟಿ ನೀಡಲಿದ್ದಾರೆ. ಸೋಮವಾರ ಅವರು ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ವೀಕ್ಷಣೆಗೆ ತೆರಳುವರು.