ನಾಳೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ?

ನಾಳೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ?

HSA   ¦    May 16, 2018 02:40:00 PM (IST)
ನಾಳೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ನಾಳೆ ಮಧ್ಯಾಹ್ನ ವೇಳೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಮಾಣವಚನ ಸ್ವೀಕಾರ ಮಾಡಲು ಬೇಕಿರುವ ತಯಾರಿ ಮಾಡಿಕೊಳ್ಳುವಂತೆ ರಾಜ್ಯಪಾಲರಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸೂಚನೆ ಬಂದಿದೆ ಎಂದು ವರದಿಗಳು ತಿಳಿಸಿವೆ.

ಇಂದು ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗವು ತಮ್ಮಲ್ಲಿ 105 ಸದಸ್ಯರ ಸಂಖ್ಯಾಬಲವಿದೆ. ತಮಗೆ ಅವಕಾಶ ನೀಡಬೇಕೆಂದು ಕೇಳಿದ್ದಾಗಿ ತಿಳಿದುಬಂದಿದೆ.

ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುವರು ಎಂದು ತುಂಬಾ ಮಹತ್ವ ಪಡೆದುಕೊಂಡಿದೆ.