ಸಚಿವ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ಜಪ್ತಿ ಸನ್ನಿಹಿತ

ಸಚಿವ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ಜಪ್ತಿ ಸನ್ನಿಹಿತ

HSA   ¦    Jan 08, 2019 03:27:19 PM (IST)
ಸಚಿವ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ಜಪ್ತಿ ಸನ್ನಿಹಿತ

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿಯನ್ನು ಜಪ್ತಿ ಮಾಡುವ ಸಾಧ್ಯತೆಗಳು ದಟ್ಟವಾಗಿದೆ ಎಂದು ವರದಿಗಳು ಹೇಳಿವೆ.

ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರನ್ನು ಕಳೆದ ಕೆಲವು ದಿನಗಳಿಂದ ಆದಾಯ ತೆರಿಗೆ ಇಲಾಖೆಯು ವಿಚಾರಣೆ ನಡೆಸುತ್ತಿದೆ. ಬೇನಾಯಿ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ತನಿಖೆ ಪ್ರಗತಿಯಲ್ಲಿದೆ.

ಶಿವಕುಮಾರ್ ಹಾಗೂ ಅವರ ಕುಟುಂಬಸ್ಥರು ಹೊಂದಿರುವ ಅಕ್ರಮ ಆಸ್ತಿ ಜಪ್ತಿ ಮಾಡಲು ಆದಾಯ ತೆರಿಗೆ ಇಲಾಖೆಯು ಪ್ರಕ್ರಿಯೆ ಆರಂಭಿಸಿದೆ. ಜಪ್ತಿಗೆ ಮುನ್ನಾ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.

ಡಿಕೆಶಿ ತನ್ನ ತಾಯಿ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದು, ಅವರ ವಿರುದ್ಧವೂ ಆರೋಪಗಳಿವೆ. ಈ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಕಳೆದ ವಾರ ಡಿಕೆಶಿ ತಾಯಿ ಅವರನ್ನು ವಿಚಾರಣೆ ಮಾಡಿದ್ದರು.