ಶೀಘ್ರವೇ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಪೂರ್ಣ: ಕೆ.ಜೆ. ಜಾರ್ಜ್

ಶೀಘ್ರವೇ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಪೂರ್ಣ: ಕೆ.ಜೆ. ಜಾರ್ಜ್

LK   ¦    Oct 11, 2017 09:17:34 AM (IST)
ಶೀಘ್ರವೇ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಪೂರ್ಣ: ಕೆ.ಜೆ. ಜಾರ್ಜ್

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳ ಗುಂಡಿ ಮುಚ್ಚುವ ಕೆಲಸವನ್ನು ಇನ್ನೂ 15 ದಿನದೊಳಗೆ ಪೂರ್ಣಗೊಳಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬೆಂಗಳೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಒತ್ತನ್ನು ನೀಡಿ ಕೆಲಸ ಮಾಡಿದೆ. ಮಳೆ ನಿಂತ ನಂತರ ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು ಎಂದರು.

ಭೂಪಸಂದ್ರದಲ್ಲಿ 200 ಕೋಟಿ ರೂ. ಮೌಲ್ಯದ ನಿವೇಶನವನ್ನು ಡಿ. ನೋಟಿಫಿಕೇಶನ್ ಮಾಡಿರುವುದಾಗಿ ವಿರೋಧ ಪಕ್ಷದ ಮುಖಂಡರ ಆರೋಪಕ್ಕೆ ಉತ್ತರಿಸಿದ ಅವರು ಇದು ಸತ್ಯಕ್ಕೆ ದೂರವಾದದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಡಿ. ನೋಟಿಫಿಕೇಶನ್ ಮಾಡಿಲ್ಲ, ಸುಮ್ಮನೆ ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ನೀಡಲಿ, ನಾವು ಪರಿಶೀಲಿಸಿ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.