ಸರ್ಕಾರ ರಚನೆಗೆ ನೆರವಾದವರಿಗೆ ಸಚಿವ ಸ್ಥಾನ: ಆರ್. ಅಶೋಕ್

ಸರ್ಕಾರ ರಚನೆಗೆ ನೆರವಾದವರಿಗೆ ಸಚಿವ ಸ್ಥಾನ: ಆರ್. ಅಶೋಕ್

HSA   ¦    Jan 27, 2020 02:14:29 PM (IST)
ಸರ್ಕಾರ ರಚನೆಗೆ ನೆರವಾದವರಿಗೆ ಸಚಿವ ಸ್ಥಾನ: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ನೆರವಾದವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದರು.

ಸಚಿವ ಸಂಪುಟದಲ್ಲಿ ಇರುವ ಸಚಿವರ ಪದತ್ಯಾಗವಿಲ್ಲ. ಮಾಧುಸ್ವಾಮಿ ಅವರು ವೈಯಕ್ತಿಕ ಹೇಳಿಕೆ ನೀಡಿದ್ದಾರೆ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಅಕ್ರಮ ಸಕ್ರಮದಡಿ ಸುಮಾರು 10 ಸಾವಿರ ಮಂದಿಗೆ ಹಕ್ಕುಪತ್ರಕ್ಕಾಗಿ ಅರ್ಜಿ ಮಾಡಿರುವರು. ಮಂಗಳವಾರ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು.