ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಅಸಮಾಧಾನ ಕೂಗು!

ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಅಸಮಾಧಾನ ಕೂಗು!

HSA   ¦    Jul 11, 2018 04:00:22 PM (IST)
ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಅಸಮಾಧಾನ ಕೂಗು!

ಬೆಂಗಳೂರು: ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಶಾಸಕಾಂಗ ಪಕ್ಷ ಸಭೆಗೆ ಹಲವಾರು ಮಂದಿ ಶಾಸಕರು ಗೈರು ಹಾಜರಾಗಿದ್ದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಬಜೆಟ್ ನಲ್ಲಿ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಜೆಟ್ ನಲ್ಲಿ ಜೆಡಿಎಸ್ ಪ್ರಾಬಲ್ಯದ ಜಿಲ್ಲೆಗಳಿಗೆ ಮಾತ್ರ ಆದ್ಯತೆ ನೀಡಲಾಗಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕಕ್ಕೆ ಬಜೆಟ್ ನಲ್ಲಿ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅನ್ನಭಾಗ್ಯ ಯೋಜನೆಯಲ್ಲೂ ಎರಡು ಕೆಜಿ ಅಕ್ಕಿ ಕಡಿತ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳದ ವಿಚಾರವಾಗಿ ನಾವು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಆದರೆ ರಾಜ್ಯ ಸರ್ಕಾರ ತೆರಿಗೆ ವಿಧಿಸಿದೆ. ಇದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬಜೆಟ್ ಬಿಲ್ ಪಾಸ್ ಆಗೋದ್ರೊಳಗೆ ಇದನ್ನು ಸರಿಪಡಿಸಿ ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು.

ಸಭೆಯಲ್ಲಿ 35-40 ಶಾಸಕರು ಮಾತ್ರ ಭಾಗವಹಿಸಿದ್ದರು. ಮಾಜಿ ಸಚಿವ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಮೊದಲಾದವರು ಗೈರು ಹಾಜರಿದ್ದರು.