ರಾಜ್ಯದ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್: ಯಡಿಯೂರಪ್ಪ

ರಾಜ್ಯದ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್: ಯಡಿಯೂರಪ್ಪ

HSA   ¦    Mar 13, 2019 04:43:22 PM (IST)
ರಾಜ್ಯದ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್: ಯಡಿಯೂರಪ್ಪ

ಬೆಂಗಳೂರು: ಶೋಭಾ ಕರಂದ್ಲಾಜೆ ಸಹಿತ ರಾಜ್ಯದ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ನಗರದಲ್ಲಿರುವ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಉಳಿದ ಕಡೆಗಳಲ್ಲಿ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಲಾಗುತ್ತಿದೆ ಎಂದರು.

ಸುಮಲತಾ ಅಂಬರೀಷ್ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಈಗಲೇ ಹೇಳುವಂತಿಲ್ಲ. ನೀವು ಒಂದೆರಡು ದಿನ ಕಾದು ನೋಡಿ ಎಂದು ಅವರು ತಿಳಿಸಿದರು.

ಶೋಭಾ ಕರಂದ್ಲಾಜೆ ಸಹಿತ 16 ಲೋಕಸಭಾ ಕ್ಷೇತ್ರದ ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂದು ಪರೋಕ್ಷವಾಗಿ ಹೇಳಿರುವರು.

More Images