ಬಿಬಿಎಂಪಿ ನೂತನ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ

ಬಿಬಿಎಂಪಿ ನೂತನ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ

Sep 28, 2016 05:30:26 PM (IST)

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಜಿ.ಪದ್ಮಾವತಿ ಅವರು ಬುಧವಾರ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ ಕಚೇರಿಯ ಕೆಂಪೇಗೌಡ ಸಭಾಂಗಣದಲ್ಲಿ ಇಂದು ನಡೆದ ಮೇಯರ್ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಮುಂದುವರೆದಿದ್ದು, ಜೆಡಿಎಸ್  ಕಾರ್ಪೋರೇಟರ್ ಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಜಿ ಪದ್ಮಾವತಿ ಅವರು ಆಯ್ಕೆಯಾಗಿದ್ದಾರೆ. ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಜಿಲ್ಲಾಧಿಕಾರಿ ವಿ.ಶಂಕರ್ ಹಾಗೂ ಹಾಲಿ ಮೇಯರ್  ಮಂಜುನಾಥ್ ರೆಡ್ಡಿ ಉಪಸ್ಥಿತರಿದ್ದರು.

ಮತದಾನದಲ್ಲಿ 28 ಶಾಸಕರು, 28 ಎಂಎಲ್ ಸಿಗಳು, 11 ರಾಜ್ಯಸಭಾ ಸದಸ್ಯರು, 5 ಲೋಕಸಭಾ ಸದಸ್ಯರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ.ಪದ್ಮಾವತಿ ಅವರ ಪರ ಒಟ್ಟು 142 ಮತಗಳನ್ನು ಗಳಿಸಿದರೆ, ಅವರ ಪ್ರತಿಸ್ಪರ್ಧಿ ಬಿಜೆಪಿಯ ಡಿಹೆಚ್ ಲಕ್ಷ್ಮಿ ಅವರು 120 ಮತಗಳನ್ನು ಗಳಿಸಿ ಪರಾಭವಗೊಂಡರು.