ಕರಾವಳಿ ಭಾಗದಲ್ಲಿ ಅಕಾಲಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಭಾಗದಲ್ಲಿ ಅಕಾಲಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

HSA   ¦    Feb 09, 2019 06:07:10 PM (IST)
ಕರಾವಳಿ ಭಾಗದಲ್ಲಿ ಅಕಾಲಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಸಹಿತ ಕರಾವಳಿ ಭಾಗದ ಕೆಲವೆಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ಜಯನಗರ, ಬನಶಂಕರಿ, ಉತ್ತರಹಳ್ಳಿ, ಬನಶಂಖರಿ, ಉತ್ತರಹಳ್ಳಿ ಇತರ ಕಡೆಗಳಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆಯು ನಿನ್ನೆ ನಡೆದಿದೆ.