ಸಂಕ್ರಾಂತಿ ಹಬ್ಬಕ್ಕೆ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಸಂಕ್ರಾಂತಿ ಹಬ್ಬಕ್ಕೆ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

YK   ¦    Jan 11, 2019 04:05:57 PM (IST)
ಸಂಕ್ರಾಂತಿ ಹಬ್ಬಕ್ಕೆ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು:ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ  ಇದೇ 11 ಮತ್ತು 12ರಂದು ಬೆಂಗಳೂರಿನಿಂದ 500 ಹೆಚ್ಚುವರಿ  ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಅದರ ಜತೆಗೆ ನಾಲ್ಕಕ್ಕಿಂತ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಬುಕ್ ಮಾಡಿದವರಿಗೆ ಶೇ 5ರಷ್ಟು ರಿಯಾಯಿತಿ ದರವನ್ನು ಕೊಡುಗೆಯಾಗಿ ನೀಡಿದೆ.

15ರಂದು ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಕೆಂಪೇಗೌಡ  ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುವಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಲೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಕಾರ್ಯಾಚರಣೆ ನಡೆಸಲಿದೆ.

ತಮಿಳುಣಾಡು ಮತ್ತು ಆಂಧ್ರಪ್ರದೇಶ- ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಮತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಟಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ. ಮುಂಗಡವಾಗಿ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ನೀಡಲಾಗಿದೆ.