ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ನೂರು ಕೋಟಿ ಆಫರ್!

ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ನೂರು ಕೋಟಿ ಆಫರ್!

HSA   ¦    May 16, 2018 03:08:38 PM (IST)
ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ನೂರು ಕೋಟಿ ಆಫರ್!

ಬೆಂಗಳೂರು: ಬಿಜೆಪಿಯು ಸರ್ಕಾರ ರಚನೆ ಮಾಡಲು ಈಗ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ನೂರು ಕೋಟಿ ರೂಪಾಯಿ ಆಫರ್ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಆರೋಪ ಮಾಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಭಾರೀ ಟೀಕೆ ಮಾಡಿದರು. ಭಷ್ಟ್ರಾಚಾರವೆಂದು ಮಾತನಾಡುವ ಮೋದಿ ಅವರು ಈಗ ಕರ್ನಾಟಕದಲ್ಲಿ ಶಾಸಕರ ಖರೀದಿಗೆ ಯಾವ ಹಣ ಬಳಕೆ ಮಾಡುತ್ತಾರೆ ಎಂದು ಜನರಿಗೆ ತಿಳಿಸಬೇಕು ಎಂದರು.

ಗೋವಾದಲ್ಲಿ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿದ್ದರೂ ಬಿಜೆಪಿ ಮೈತ್ರಿ ಸರ್ಕಾರ ಮಾಡಿದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಮಾಡಲು ಬಿಡುವುದಿಲ್ಲವೆಂದು ಹೇಳುತ್ತಾರೆ. ಇದು ಅಧಿಕಾರದ ದುರುಪಯೋಗ ಎಂದು ಕುಮಾರಸ್ವಾಮಿ ಆರೋಪಿಸಿದರು.