ಬೆಂಗಳೂರು: ಪೊಲೀಸ್ ಮಾಹಿತಿದಾರರನ ಬರ್ಬರ ಕೊಲೆ

ಬೆಂಗಳೂರು: ಪೊಲೀಸ್ ಮಾಹಿತಿದಾರರನ ಬರ್ಬರ ಕೊಲೆ

YK   ¦    Jan 26, 2020 01:30:56 PM (IST)
ಬೆಂಗಳೂರು: ಪೊಲೀಸ್ ಮಾಹಿತಿದಾರರನ ಬರ್ಬರ ಕೊಲೆ

ಬೆಂಗಳೂರು: ಪೊಲೀಸ್ ಮಾಹಿತಿದಾರನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಸಂದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಅಲಿಯಾಸ್ ಅಪ್ಪು (27) ಎಂದು ಗುರುತಿಸಲಾಗಿದೆ.

ಕಳ್ಳರ ಬಗ್ಗೆ ಪೊಲೀಸರಿಗೆ ಪ್ರಭು ಮಾಹಿತಿ ನೀಡುತ್ತಿದ್ದರು. ಹಳೆ ದ್ವೇಷದ ಹಿನ್ನೆಲೆ ಕೊಲೆ ನಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪ್ರಭು ಅವರಿಗೆ ಹಲವು ಬಾರಿ ಇರಿದಿದ್ದಾರೆ. ರಕ್ತಸ್ರಾವದಿಂದ ಪ್ರಭು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು