ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ: ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ: ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

HSA   ¦    Jun 12, 2019 12:09:08 PM (IST)
ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ: ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ದೇವರ ವಿಗ್ರಹ ಧ್ವಂಸಗೊಳಿಸಿದ್ದಾನೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರನ್ನು ಬೆತ್ತಳೆ ಮೆರವಣಿಗೆ ನಡೆಸಿದ ಘಟನೆಯು ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೃತ್ಯವನ್ನು ಖಂಡಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಆತನನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸುಚಿಸಿದ್ದೇನೆ. ಸಮಾಜದಲ್ಲಿ ಇಂತಹ ಕ್ರಮಗಳು ಇನ್ನು ಮುಂದುವರಿಯುತ್ತಿರುವುದು ದುರದೃಷ್ಟಕರ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಘಟನೆಯು ಜೂನ್ 2ರಂದು ನಡೆದಿದೆ. ಆದರೆ ಇದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.