ಮೊಳಕಾಲ್ಮೂರು ಬಿಜೆಪಿ ಟಿಕೆಟ್ ಗೊಂದಲ: ಸಂಧಾನ ವಿಫಲ

ಮೊಳಕಾಲ್ಮೂರು ಬಿಜೆಪಿ ಟಿಕೆಟ್ ಗೊಂದಲ: ಸಂಧಾನ ವಿಫಲ

HSA   ¦    Apr 15, 2018 02:33:00 PM (IST)
ಮೊಳಕಾಲ್ಮೂರು ಬಿಜೆಪಿ ಟಿಕೆಟ್ ಗೊಂದಲ: ಸಂಧಾನ ವಿಫಲ

ಬೆಂಗಳೂರು: ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ ಉಂಟಾಗಿರುವ ಉದ್ವಿಗ್ನತೆ ಶಮನ ಮಾಡಲು ಬಿಜೆಪಿ ರಾಜ್ಯಾಧಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗಿದ್ದಾರೆ.

ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಹಾಲಿ ಶಾಸಕ ಎಸ್. ತಿಪ್ಪೇಸ್ವಾಮಿ ಮತ್ತು ಅವರ ಬೆಂಬಲಿಗರ ಅಸಮಾಧಾನ ತೀವ್ರಗೊಳ್ಲಲು ಕಾರಣವಾಗಿದೆ.

ಶನಿವಾರ ಶ್ರೀರಾಮುಲು ಹಾಗೂ ತಿಪ್ಪೇಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಯಡಿಯೂರಪ್ಪ ಅವರು ಸಂಧಾನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ತಿಪ್ಪೇಸ್ವಾಮಿ ಬೆಂಗಳೂರಿಗೆ ಬರಲಿಲ್ಲ. ಶ್ರೀರಾಮುಲು ಅವರು ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಯಡಿಯೂರಪ್ಪ ಅವರಲ್ಲಿ ಹೇಳಿರುವುದಾಗಿ ತಿಳಿದುಬಂದಿದೆ.