ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

HSA   ¦    Jan 08, 2019 07:06:14 PM (IST)
ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಎಡಪಕ್ಷ ಬೆಂಬಲಿತ ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರ ವಿರುದ್ಧ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೆಚ್ಚಿನ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ಮುಚ್ಚಿದ್ದವು. ಕೆಲವೊಂದು ಕಡೆಗಳಲ್ಲಿ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸಿದವು.

ಕೆಎಸ್ ಆರ್ ಟಿಸಿ ಬಸ್ ಗಳು ಕೂಡ ಕೆಲವು ಜಿಲ್ಲೆಯಲ್ಲಿ ನಿತ್ಯದಂತೆ ಸಂಚರಿಸಿದವು. ಅಂಗಡಿ ಮುಂಗಟ್ಟುಗಳು ಕೂಡ ತೆರೆದಿದ್ದವು.

ಬೆಂಗಳೂರಿನಲ್ಲಿ ಮಾತ್ರ ವಾಹನ ಹಾಗೂ ಜನ ಸಂಚಾರ ಸ್ವಲ್ಪ ಮಟ್ಟಿಗೆ ವಿರಳವಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದೆ ಬಂದ್ ಶಾಂತಿಯುತವಾಗಿ ನಡೆದಿದೆ.