ಪ್ರವಾಹ: ರಾಜ್ಯದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆಗೆ ಸರ್ಕಾರ ಸೂಚನೆ

ಪ್ರವಾಹ: ರಾಜ್ಯದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆಗೆ ಸರ್ಕಾರ ಸೂಚನೆ

YK   ¦    Aug 13, 2019 05:12:53 PM (IST)
ಪ್ರವಾಹ: ರಾಜ್ಯದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆಗೆ ಸರ್ಕಾರ ಸೂಚನೆ

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಕಾರಣದಿಂದಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮರ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ನಗರ ಜಿಲ್ಲೆನ್ನು ಹೊರತುಪಡಿಸಿ)ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು , ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲ್ಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಿದೆ.

ಕರ್ನಾಟಕದಲ್ಲಿ ಭೀಕರ ಪ್ರವಾಹಕ್ಕೆ 48ಮಂದಿ ಸಾವನ್ನಪ್ಪಿದ್ದು, ಇನ್ನೂ 12ಮಂದಿ ನಾಪತ್ತೆಯಾಗಿದ್ದಾರೆ. ಇದುವರೆಗೆ 6.73 ಲಕ್ಷ ಮಂದಿ ಹಾಗೂ 50ಸಾವಿರ ಪ್ರಾಣಿಗಳನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ರಾಜ್ಯದಲ್ಲಿ 86ತಾಲ್ಲೂಕುಗಳಲ್ಲಿ 17 ಜಿಲ್ಲೆಗಳು ಹಾಗೂ ಅಲ್ಲಿನ 2738 ಹಳ್ಳಿಗಳು ಪ್ರವಾಹಕ್ಕೆ ತುತ್ತಾಗಿದೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದೆ.