ಬಿಎಂಟಿಸಿ ಬಸ್ ಟಿಕೆಟ್ ದರ ಕಡಿತಗೊಳಿಸಲು ಸರ್ಕಾರದ ನಿರ್ಧಾರ

ಬಿಎಂಟಿಸಿ ಬಸ್ ಟಿಕೆಟ್ ದರ ಕಡಿತಗೊಳಿಸಲು ಸರ್ಕಾರದ ನಿರ್ಧಾರ

HSA   ¦    Nov 07, 2019 02:19:43 PM (IST)
ಬಿಎಂಟಿಸಿ ಬಸ್ ಟಿಕೆಟ್ ದರ ಕಡಿತಗೊಳಿಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್ ಗಳನ್ನು ಉಪಯೋಗಿಸಲು ಎನ್ನುವ ದೂರದೃಷ್ಟಿಯಿಂದ ರಾಜ್ಯ ಸರ್ಕಾರವು ಟಿಕೆಟ್ ದರ ಕಡಿತ ಮಾಡಲು ನಿರ್ಧರಿಸಿದೆ.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಬಳಕೆ ಮಾಡುವಂತೆ ಆಗಲು ಇನ್ನೂ ಸುಮಾರು 6500 ಹೊಸ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬಿಎಂಟಿಸಿಯ ಸಭೆಯಲ್ಲಿ ಭಾಗಿಯಾದ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಬಿಎಂಟಿಸಿಗೆ ಆಗುತ್ತಿರುವ ನಷ್ಟ ಸರಿದೂಗಿಸಲು ರಾಜ್ಯ ಸರ್ಕಾರವು ಇಂಧನ ಮತ್ತು ಇತರ ಖರ್ಚುಗಳಲ್ಲಿ ಸಬ್ಸಿಡಿ ನೀಡಲಿದೆ. ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವುದು ಮತ್ತು ಹೆಚ್ಚು ಹೆಚ್ಚು ಜನರು ಸರ್ಕಾರಿ ಸಾರಿಗೆ ಬಳಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.