ಐದು ಸಾವಿರ ಕೋಟಿ ರೂ.ಬಿಡುಗಡೆ ಮಾಡಲು ಪ್ರಧಾನಿಗೆ ದೇವೇಗೌಡ ಪತ್ರ

ಐದು ಸಾವಿರ ಕೋಟಿ ರೂ.ಬಿಡುಗಡೆ ಮಾಡಲು ಪ್ರಧಾನಿಗೆ ದೇವೇಗೌಡ ಪತ್ರ

HSA   ¦    Aug 12, 2019 04:00:48 PM (IST)
ಐದು ಸಾವಿರ ಕೋಟಿ ರೂ.ಬಿಡುಗಡೆ ಮಾಡಲು ಪ್ರಧಾನಿಗೆ ದೇವೇಗೌಡ ಪತ್ರ

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರವಾಹದಿಂದಾಗಿ ಭಾರೀ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಧ್ಯಂತರ ಪರಿಹಾರ ರೂಪದಲ್ಲಿ ಐದು ಸಾವಿರ ಕೋಟಿ ರೂಪಾಯಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಭಾರೀ ಪ್ರವಾಹದಿಂದಾಗಿ ಉಂಟಾಗಿರುವ ಹಾನಿಯನ್ನು ವಿವರಿಸಿದ್ದಾರೆ. ಇದೇ ವೇಳೆ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಮುಖ್ಯಮಂತ್ರಿ ಅವರ ಕೈ ಬಲಪಡಿಸುವ ಕೆಲಸವನ್ನು ನಾವೆಲ್ಲರು ಮಾಡಬೇಕು ಎಂದು ದೇವೇಗೌಡ ಅವರು ಮಾಧ್ಯಮದವರಿಗೆ ಹೇಳಿದರು.