ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

Oct 11, 2017 12:39:50 PM (IST)
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

ಬೆಂಗಳೂರು: ಇಲ್ಲಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ರೋಡ್ನಲ್ಲಿ ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ನಡೆದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

20 ವರ್ಷ ತೇಜಸ್ವಿ ಗೌಡ ಮೃತಪಟ್ಟಿರುವ ದುರ್ದೈವಿ. ತೇಜಸ್ವಿ ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಹೋಗಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಯುವಕನ ಮೇಲೆ ಹರಿದಿದೆ. ಪರಿಣಾಮ ತೇಜಸ್ವಿ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸದ್ಯ ಈತನ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಮೂಲಕ ನಗರದ ರಸ್ತೆ ಗುಂಡಿಗೆ ಬಿದ್ದು ಮೃತಪಟ್ಟಿರುವುದು ಇದು 5ನೇ ಪ್ರಕರಣವಾಗಿದೆ.