ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಂಟ್ವಾಳ ನಿವಾಸಿ ಸೆರೆ

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಂಟ್ವಾಳ ನಿವಾಸಿ ಸೆರೆ

HSA   ¦    Jan 11, 2018 02:22:24 PM (IST)
ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಂಟ್ವಾಳ ನಿವಾಸಿ ಸೆರೆ

ಬೆಂಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಆರೋಪಿ, ದಕ್ಷಿಣ ಕನ್ನಡ ಬಂಟ್ವಾಳ ನಿವಾಸಿ ಸಂತೋಷ್(20)ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಬಡಗಜೇಕಾರ್ ನಿವಾಸಿ ಸಂತೋಷ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧನ್ಯಶ್ರೀಗೆ ಸಂತೋಷ್ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಧನ್ಯಶ್ರೀ ಕಳೆದ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಳು.