ಮನೆ ಮುಂದೆ ಬೋರ್ಡ್ ಹಾಕಿ ಅಭಿಮಾನಿಗಳಲ್ಲಿ ದಚ್ಚು ಮನವಿ

ಮನೆ ಮುಂದೆ ಬೋರ್ಡ್ ಹಾಕಿ ಅಭಿಮಾನಿಗಳಲ್ಲಿ ದಚ್ಚು ಮನವಿ

YK   ¦    Jan 20, 2020 04:38:53 PM (IST)
ಮನೆ ಮುಂದೆ ಬೋರ್ಡ್ ಹಾಕಿ ಅಭಿಮಾನಿಗಳಲ್ಲಿ ದಚ್ಚು ಮನವಿ

ಬೆಂಗಳೂರು: ಫೆ.16ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿ ಜನ್ಮ ದಿನ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದು ಹಾಗೂ ತಮ್ಮ ಮನೆ ಮುಂದೆ ಬ್ಯಾನರ್ ವೊಂದನ್ನು ಹಾಕಿದ್ದಾರೆ.

ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ಪ್ರೀತಿಯ ದರ್ಶನ್‌ ತೂಗುದೀಪ ಮಾಡುವ ವಿನಂತಿ. ‘ಬ್ಯಾನರ್‌, ಕೇಕ್‌ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರೇ ಧವಸ, ಧಾನ್ಯಗಳನ್ನು ದಾನ ಮಾಡಿ. ಅದನ್ನು ಒಗ್ಗೂಡಿಸಿ ಸೇರಬೇಕಾದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು’.

ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ-ಪಕ್ಕದ ನಿವಾಸಿಗಳಿಗೆ ನಿಮ್ಮಿಂದ ತೊಂದರೆಯಾಗುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು ಹೂವು ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ನಡೆಯಬಾರದು. ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ಈ ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ. ಹಾಗೂ ಸಂಘದ ಕಾರ್ಯಕರ್ತರಿಗಹೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಟ ಅಂಬರೀಷ್ ಅವರು ನಿಧನರಾದ ಹಿನ್ನೆಲೆ ದರ್ಶನ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಈ ಬಾರಿಯೂ ಸರಳವಾಗಿ ಹುಟ್ಟು ಹಬ್ಬ ಆಚರಿಸುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.