ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ

HSA   ¦    Jan 16, 2020 11:14:40 AM (IST)
ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ

ವಿರಾಜಪೇಟೆ: ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಕೊಡಗಿನ ವಿರಾಜಪೇಟೆಯಲ್ಲಿ ಇರುವ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿರುವರು.

ರಶ್ಮಿಕಾ ಮಂದಣ್ಣ ಅವರು ತೆಲುಗು ಹಾಗೂ ಕನ್ನಡದಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ರಶ್ಮಿಕಾ ಅವರ ತಂದೆಗೆ ಸೇರಿದ ಸೆರೆನಿಟಿ ಹಾಲ್ ಮೇಲೆ ಕೂಡ ಐಟಿ ಅಧಿಕಾರಿಗಳ ದಾಳಿ ಆಗಿದೆ.