ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

YK   ¦    Feb 28, 2020 07:04:32 PM (IST)
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಲಘು ಹೃದಯಾಘಾತವಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬುಧವಾರ ರಾತ್ರಿ ಲಘು ಹೃದಯಾಘಾತವಾಗಿ ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.

26ರಂದು ವೈದ್ಯ ಆದಿತ್ಯ ಉಡುಪ ಹಾಗೂ ತಂಡ ಕೊರೊನರಿ ಆಂಜಿಯೊಗ್ರಾಂ ಹಾಗೂ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 2 ತಿಂಗಳ ಕಾಲ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.