ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಅರ್ಜಿ ವಿಚಾರಣೆ ಮುಂದೂಡಿಕೆ

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಅರ್ಜಿ ವಿಚಾರಣೆ ಮುಂದೂಡಿಕೆ

HSA   ¦    May 07, 2018 04:21:19 PM (IST)
ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಅರ್ಜಿ ವಿಚಾರಣೆ ಮುಂದೂಡಿಕೆ

ಜೋಧ್ ಪುರ್: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್, ಶಿಕ್ಷೆ ವಜಾಗೊಳಿಸಬೇಕೆಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯವು ಜುಲೈ 17ಕ್ಕೆ ಮುಂದೂಡಿದೆ.

ಸೋಮವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚಂದ್ರ ಕುಮಾರ್ ಸೊಂಗರ ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡಾಗ ಸಲ್ಮಾನ್ ಪರ ವಕೀಲರು ಸಮಯಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.

ಎಪ್ರಿಲ್ 5ರಂದು ಸಲ್ಮಾನ್ ದೋಷಿ ಎಂದು ಪರಿಗಣಿಸಿ, ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು. ಎ.7ರಂದು ಜಾಮೀನು ಪಡೆದು ಅವರು ಹೊರಬಂದಿದ್ದರು.

1998ರಲ್ಲಿ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಇಲ್ಲಿ ಕೃಷ್ಣಮೃಗ ಬೇಟೆಯಾಡಿದ್ದರು. ಈ ಪ್ರಕರಣದಲ್ಲಿ ಸಿಲುಕಿದ್ದ ನಟ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂನ್ನು ಕೋರ್ಟ್ ದೋಷಮುಕ್ತಗೊಳಿಸಿತ್ತು.