ತೆರೆಗೆ ಬರಲು ರೆಡಿಯಾಗುತ್ತಿದೆ ಕಾನೂರಾಯಣ ಚಿತ್ರ

ತೆರೆಗೆ ಬರಲು ರೆಡಿಯಾಗುತ್ತಿದೆ ಕಾನೂರಾಯಣ ಚಿತ್ರ

YK   ¦    Feb 05, 2018 07:33:08 PM (IST)
ತೆರೆಗೆ ಬರಲು ರೆಡಿಯಾಗುತ್ತಿದೆ ಕಾನೂರಾಯಣ ಚಿತ್ರ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ 20 ಲಕ್ಷ ಸದಸ್ಯರು ಸೇರಿ ನಿರ್ಮಿಸಿರುವ ಕಾನೂರಾಯಣ ಚಲನಚಿತ್ರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದೇ 9ರಂದು ರಂದು ಶುಕ್ರವಾರ ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಚಿನ್ನಸ್ವಾಮಿ ಕ್ರಿಕೆಟ್ ಅಸೋಸಿಯೇಶನ್ ಕ್ಲಬ್ ನಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು, ನಿರ್ದೇಶಕ ಶ್ರೀ ಟಿ. ಎಸ್. ನಾಗಾಭರಣ, ಚಲನಚಿತ್ರ ತಂಡ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಹಾಜರಿರುವರು. ಕಾನೂರಾಯಣ ಚಿತ್ರಕ್ಕೆ ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಂಗೀತ ನೀಡಿದ್ದು, ಐದು ಹಾಡುಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭ ಚಲನಚಿತ್ರದ ಟೀಸರ್ ಗಳನ್ನು, ಬ್ಯಾನರ್ಗಳನ್ನು ಬಿಡುಗಡೆ ಮಾಡಲಾಗುವುದು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶಯಗಳನ್ನು ಒಳಗೊಂಡು ಗ್ರಾಮೀಣ ಪ್ರದೇಶದಲ್ಲಿ ಎದುರಿಸುವ ಸವಾಲುಗಳನ್ನು ಮುಂದಿಟ್ಟುಕೊಂಡು ತಯಾರಿಸಿರುವ ಈ ಚಲನಚಿತ್ರದಲ್ಲಿ ಪ್ರಖ್ಯಾತ ಕಲಾವಿದರು, ಚಿಕ್ಕಮಗಳೂರಿನ ಬೆಳವಡಿ ಗ್ರಾಮದಲ್ಲಿ ಸುಮಾರು 40 ದಿನಗಳ ಕಾಲ ಶೂಟಿಂಗ್ ನಡೆಸಿ ಸಿದ್ಧಪಡಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸುತ್ತದೆ.

More Images