ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕ- ನಿಕ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕ- ನಿಕ್

YK   ¦    Dec 03, 2018 11:20:41 AM (IST)
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕ- ನಿಕ್

ಜೋಧ್ ಪುರ: ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಪ್ರಿಯಾಂಕ ಚೋಪ್ರಾ ಅವರು ಅಮೆರಿಕದ ಗಾಯಕ ನಿಕ್ ಜೋನಾಸ್ ಅವರನ್ನು ಭಾನುವಾರ ಹಿಂದೂ ಸಂಪ್ರದಾಯದಂತೆ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೂರು ದಿನಗಳ ಮದುವೆ ಸಮಾರಂಭವಾದ ಮೆಹೆಂದಿ ಕಾರ್ಯಕ್ರಮ, ಕ್ರಿಕೆಟ್ ಪಂದ್ಯ ಹಾಗೂ ಸಂಗೀತ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದೆ.

ಪ್ರಿಯಾಂಕ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ನಿಕ್ ಜೋನಾಸ್ ಅವರು ಹಿಂದೂ ಸಂಪ್ರದಾಯದಂತೆ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಪ್ರಿಯಾಂಕ ಅವರನ್ನು ವರಿಸಿದರು.